ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಕುಂಬ್ಳೆ ಸುಂದರ ರಾವ್‌ಗೆ ಉಡುಪಿ ತೆಂಕುತಿಟ್ಟು ವೇದಿಕೆ ಪ್ರಶಸ್ತಿ ಪ್ರದಾನ

ಲೇಖಕರು : ಉದಯವಾಣಿ
ಬುಧವಾರ, ಜೂನ್ 22 , 2016
ಜೂನ್ 22 , 2016

ಕುಂಬ್ಳೆ ಸುಂದರ ರಾವ್‌ಗೆ ಉಡುಪಿ ತೆಂಕುತಿಟ್ಟು ವೇದಿಕೆ ಪ್ರಶಸ್ತಿ ಪ್ರದಾನ

ಉಡುಪಿ : ತೆಂಕುತಿಟ್ಟು ಯಕ್ಷಗಾನದ ಪ್ರದೇಶದವನಾದ ನಾನು ಅರಿತಂತೆ ಈ ಹಿಂದೆ ತೆಂಕು-ಬಡಗುತಿಟ್ಟುಗಳು ಒಂದನ್ನೊಂದು ಸಂಧಿಸುತ್ತಿರಲಿಲ್ಲ. ಅನಂತರದ ದಿನಗಳಲ್ಲಿ ಈ ಎರಡೂ ಪ್ರಭೇದಗಳ ಶ್ರೇಷ್ಠತೆ, ಕಲಾವಿದರ ಸಾಮರ್ಥ್ಯ ಎಲ್ಲ ಪ್ರದೇಶದವರಿಗಲ್ಲದೇ ದೇಶ-ವಿದೇಶಗಳಲ್ಲೂ ತಿಳಿಯುವಂತಾಯಿತು ಎಂದು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ನುಡಿದರು.

ರಾಜಾಂಗಣದಲ್ಲಿ ಶನಿವಾರ ನಡೆದ "ರಾತ್ರಿ ಆಟ'ದಲ್ಲಿ ಅವರು, ಸುಧಾಕರ ಆಚಾರ್ಯರಂಥವರು ಕಲಾಪ್ರಸಾರಕ್ಕೆ "ತೆಂಕುತಿಟ್ಟು ವೇದಿಕೆ' ಸ್ಥಾಪಿಸಿ ಪ್ರತಿ ವರ್ಷ ತೆಂಕುತಿಟ್ಟು ಯಕ್ಷಗಾನ ಪ್ರದರ್ಶನ ಏರ್ಪಡಿಸುವ ಮೂಲಕ ಕಲಾ ಪೋಷಕರಾಗಿದ್ದಾರೆ ಎಂದರು.

ತಮ್ಮ ಪರ್ಯಾಯ ಅವಧಿಯಲ್ಲಿ ಕುಂಬ್ಳೆ ಸುಂದರ ರಾವ್‌ ಅವರ ಎಲ್ಲ ಪಾತ್ರ ನಿರ್ವಹಣೆ ಬಹು ಖುಷಿಕೊಟ್ಟಿದೆ ಎಂದು ಅವರಿಗೆ 10,000 ರೂ. ಗೌರವನಿಧಿಯೊಂದಿಗೆ "ತೆಂಕುತಿಟ್ಟು ವೇದಿಕೆ ಪ್ರಶಸ್ತಿ' ಪ್ರದಾನಿಸಿ ಆಶೀರ್ವಚನಗೈದರು.

ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು ಆಶೀರ್ವಚಿಸಿದರು. ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ| ಎಂ.ಎಲ್‌. ಸಾಮಗ ಅಭಿನಂದನ ಭಾಷಣ ಮಾಡಿ, ಕುಂಬ್ಳೆ ಅವರ ಅಭಿನಂದನ ಗ್ರಂಥ "ಸುಂದರ ಕಾಂಡ'ದಲ್ಲಿ ಅವರ ಇಡೀ ವ್ಯಕ್ತಿ ಚಿತ್ರಣ ಅದ್ಭುತವಾಗಿ ಮೂಡಿಬಂದಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಉದ್ಯಮಿ ಸುರೇಶ ಶೆಟ್ಟಿ ಗುರ್ಮೆ ಮಾತನಾಡಿ, ಭಾರತೀಯ ಸನಾತನ ಸಂಸ್ಕೃತಿಯ ಶ್ರೇಷ್ಠತೆ, ಆಧ್ಯಾತ್ಮಿಕ ಮೌಲ್ಯಗಳು ಪ್ರಪಂಚದೆಲ್ಲೆಡೆ ಹಾಸುಹೊಕ್ಕಾಗಿವೆ. ಅವುಗಳಲ್ಲೊಂದಾದ ಯಕ್ಷಗಾನ ಸಂಸ್ಕೃತಿಯ ಶ್ರೇಷ್ಠತೆ, ಆಧ್ಯಾತ್ಮಿಕ ವಿಚಾರಧಾರೆ, ಜೀವನದ ಮೌಲ್ಯಗಳನ್ನು ಸದಾ ಪ್ರೇರೇಪಿಸುತ್ತ ಜನರನ್ನು ಸುಸಂಸ್ಕೃತರನ್ನಾಗಿಸುವ ಕಾರ್ಯವನ್ನು ನಿರಂತರ ಮಾಡುತ್ತಿದೆ ಎಂದರು.

ಶ್ರೀ ಕ್ಷೇತ್ರ ಕಟೀಲಿನ ಅನಂತಪದ್ಮನಾಭ ಆಸ್ರಣ್ಣ, ತಲ್ಲೂರ್ ಫ್ಯಾಮಿಲಿ ಟ್ರಸ್ಟಿನ ಮ್ಯಾನೇಜಿಂಗ್‌ ಟ್ರಸ್ಟಿ ತಲ್ಲೂರು ಶಿವರಾಮ ಶೆಟ್ಟಿ ಶುಭ ಹಾರೈಸಿದರು. ಸುಧಾಕರ ಆಚಾರ್ಯ ಅವರ ಸಂಕಲ್ಪ-ಸಂಯೋಜನೆಯಲ್ಲಿ ಆ. 14ರಂದು ಜರಗಲಿರುವ ಹಿರಿಯ ಪತ್ರಕರ್ತ ಎಂ.ವಿ. ಹೆಗ್ಡೆ ವಿರಚಿತ "ಸ್ವರಾಜ್ಯ ವಿಜಯ' ತಾಳಮದ್ದಲೆಯ ಮಾಹಿತಿ ಪತ್ರವನ್ನು ಶ್ರೀವಿಶ್ವೇಶತೀರ್ಥ ಶ್ರೀಪಾದರು ಬಿಡುಗಡೆ ಗೊಳಿಸಿದರು.

ಎಂಜಿನಿಯರ್‌ ಎಂ.ಡಿ. ಗಣೇಶ್‌ ಸ್ವಾಗತಿಸಿ, ಪ್ರಸ್ತಾವನೆಗೈದರು. ಸುಧೀರ್‌ ಕೊಡವೂರು ಕಾರ್ಯಕ್ರಮ ನಿರೂಪಿಸಿ, ಎಂ.ಎಸ್‌. ವಿಷ್ಣು ವಂದಿಸಿದರು.ಕೃಪೆ : udayavani


Share

ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ
ಪೂರಕ ಲೇಖನಗಳು
 ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ