ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಸಾಮಾಜಿಕ ಪ್ರಸಂಗಗಳಲ್ಲಿ ಮರೆಯಾಗುತ್ತಿರುವ ಯಕ್ಷಗಾನದ ಗಾಂಭೀರ್ಯ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಸೋಮವಾರ, ಸೆಪ್ಟೆ೦ಬರ್ 23 , 2013
ಸೆಪ್ಟೆ೦ಬರ್ 23 , 2013

ಸಾಮಾಜಿಕ-ಪ್ರಸಂಗಗಳಲ್ಲಿ-ಮರೆಯಾಗುತ್ತಿರುವ-ಯಕ್ಷಗಾನದ-ಗಾಂಭೀರ್ಯ

ಉಡುಪಿ : ಯಕ್ಷಗಾನ ಸಮಷ್ಠಿಯ ಕಲೆಯಾಗಿದ್ದು, ನಾಟ್ಯ– ನೃತ್ಯ, ಅಭಿನಯ ಮಾತುಗಾರಿಕೆ ಎಲ್ಲವನ್ನೂ ಒಳಗೊಂಡಿದೆ’ ಎಂದು ಪರ್ಯಾಯ ಸೋದೆ ವಾದಿರಾಜ ಮಠದ ವಿಶ್ವವಲ್ಲಭ ಸ್ವಾಮೀಜಿ ಹೇಳಿದರು.

ಉಡುಪಿ ಶ್ರೀ ಕೃಷ್ಣಮಠ, ಪರ್ಯಾಯ ಸೋದೆ ವಾದಿರಾಜ ಮಠದ ಆಶ್ರಯದಲ್ಲಿ ಶಿವಮೊಗ್ಗದ ನಾಟ್ಯಶ್ರೀ ಕಲಾತಂಡ ರಾಜಾಂಗಣದಲ್ಲಿ ಭಾನು ವಾರ ಏರ್ಪಡಿಸಿದ್ದ ’ಯಕ್ಷೋತ್ಸವ 2013’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

ಉಡುಪಿ ಶ್ರೀ ಕೃಷ್ಣಮಠ, ಪರ್ಯಾಯ ಸೋದೆ ವಾದಿರಾಜ ಮಠದ ಆಶ್ರಯದಲ್ಲಿ ಶಿವಮೊಗ್ಗದ ನಾಟ್ಯಶ್ರೀ ಕಲಾತಂಡ ರಾಜಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪರ್ಯಾಯ ಸೋದೆ ವಾದಿರಾಜ ಮಠದ ವಿಶ್ವವಲ್ಲಭ ಸ್ವಾಮೀಜಿ ಎಂಜಿಎಂ ಯಕ್ಷಗಾನ ಕೇಂದ್ರಕ್ಕೆ ‘ಯಕ್ಷಧನ್ಯತಾ ಪ್ರಶಸ್ತಿ’, ಮೈಸೂರಿನ ವೇದ ಶಾಸ್ತ್ರ ಪೋಷಣೆ ಸಭಾದ ಕಾರ್ಯದರ್ಶಿ ವಿದ್ವಾನ್‌ ಎ.ಎಂ ಚಂದ್ರಶೇಖರ್‌ ಮತ್ತು ಸಾಮಾಜಿಕ ಕ್ಷೇತ್ರದ ಸಾಧನೆಗಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಶಾಖಾಧಿಕಾರಿ ವಿ.ಎಸ್‌.ರಾಮಮೂರ್ತಿ ಅವರಿಗೆ ‘ವಿದ್ವತ್‌ ಸನ್ಮಾನ’ ಹಾಗೂ ಯಕ್ಷಗಾನ ಕಲಾವಿದ ಅಶೋಕ್‌ ಭಟ್‌ ಸಿದ್ಧಾಪುರ ಅವರಿಗೆ ‘ನಾಟ್ಯಶ್ರೀ ಪುರಸ್ಕಾರ’ ನೀಡಲಾಯಿತು.
ಯಕ್ಷಗಾನದಲ್ಲಿ ಬದಲಾವಣೆಗಳಾ ಗುತ್ತಿದ್ದು, ಮಹತ್ವ ಕಡಿಮೆಯಾಗುತ್ತಿದೆ. ಸಾಮಾಜಿಕ ಪ್ರಸಂಗಗಳಲ್ಲಿ ಯಕ್ಷಗಾನದ ಗಾಂಭೀರ್ಯ ಮರೆಯಾಗುತ್ತಿದೆ ಎಂದು ಅವರು ಹೇಳಿದರು.

ಎಂಜಿಎಂ ಯಕ್ಷಗಾನ ಕೇಂದ್ರಕ್ಕೆ ‘ಯಕ್ಷಧನ್ಯತಾ ಪ್ರಶಸ್ತಿ’, ಮೈಸೂರಿನ ವೇದ ಶಾಸ್ತ್ರ ಪೋಷಣೆ ಸಭಾದ ಕಾರ್ಯದರ್ಶಿ ವಿದ್ವಾನ್‌ ಎ.ಎಂ ಚಂದ್ರಶೇಖರ್‌ ಮತ್ತು ಸಾಮಾಜಿಕ ಕ್ಷೇತ್ರದ ಸಾಧನೆಗಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಶಾಖಾಧಿಕಾರಿ ವಿ.ಎಸ್‌.ರಾಮಮೂರ್ತಿ ಅವರಿಗೆ ‘ವಿದ್ವತ್‌ ಸನ್ಮಾನ’ ಹಾಗೂ ಯಕ್ಷಗಾನ ಕಲಾವಿದ ಅಶೋಕ್‌ ಭಟ್‌ ಸಿದ್ಧಾಪುರ ಅವರಿಗೆ ‘ನಾಟ್ಯಶ್ರೀ ಪುರಸ್ಕಾರ’ವನ್ನು ನೀಡಿ ಗೌರವಿಸಿದರು.

ಶಾಸಕ ಪ್ರಮೋದ್‌ ಮಧ್ವರಾಜ್‌, ಹೊರನಾಡು ಆದಿಶಕ್ತಿ ಅನ್ನ ಪೂರ್ಣೇಶ್ವರಿ ದೇವಸ್ಥಾನದ ಧರ್ಮ ದರ್ಶಿ ಡಾ. ಭೀಮೇಶ್ವರ ಜೋಷಿ, ಭಾರತೀಯ ಸಂಸ್ಕೃತಿ ಪ್ರತಿಷ್ಠಾನದ ಅಧ್ಯಕ್ಷ ರಾಜಶೇಖರ ಹೆಬ್ಬಾರ್‌, ಮಂಗಳೂರು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ, ಯಕ್ಷಗಾನ ಕಲಾ ರಂಗದ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಸಾಹಿತಿ ಎಚ್‌. ಜನಾರ್ದನ ಹಂದೆ, ಮಣಿಪಾಲ ಎಂಐಟಿ ಪ್ರಾಧ್ಯಾಪಕ ಎಸ್‌.ವಿ. ಉದಯ್‌ ಕುಮಾರ್‌ ಶೆಟ್ಟಿ, ಯಕ್ಷಗುರು ಬನ್ನಂಜೆ ಸಂಜೀವ ಸುವರ್ಣ ಉಪಸ್ಥಿತರಿದ್ದರು.

ನಾಟ್ಯಶ್ರೀ ಸಂಸ್ಥೆಯ ಸಂಚಾಲಕ ವಿದ್ವಾನ್‌ ದತ್ತಮೂರ್ತಿ ಭಟ್‌ ಸ್ವಾಗತಿ ಸಿದರು. ಅರ್ಥಧಾರಿ ನಾರಾಯಣ ಯಾಜಿ ಸಾಲೇಬೈಲ್‌ ಅವರು ಅಭಿನಂದನಾ ಭಾಷಣ ಮಾಡಿದರು. ಜಿ.ಪಿ. ಪ್ರಭಾಕರ ಪ್ರಶಸ್ತಿ ಪತ್ರ ವಾಚಿಸಿದರು. ಸದಾನಂದ ಶರ್ಮ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದ ಬಳಿಕ ‘ಕರ್ಣ ಪರ್ವ’ ಯಕ್ಷಗಾನ ಪ್ರದರ್ಶನ ನಡೆಯಿತು.

ಕೃಪೆ : ಪ್ರಜಾವಾಣಿ

Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ