ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ತೆಕ್ಕಟ್ಟೆಯಲ್ಲಿ ಏಕವ್ಯಕ್ತಿ ಯಕ್ಷಗಾನ ಸ್ಪರ್ಧೆ-2013

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಶನಿವಾರ, ಸೆಪ್ಟೆ೦ಬರ್ 21 , 2013
ಸೆಪ್ಟೆ೦ಬರ್ 23 , 2013

ತೆಕ್ಕಟ್ಟೆಯಲ್ಲಿ ಏಕವ್ಯಕ್ತಿ ಯಕ್ಷಗಾನ ಸ್ಪರ್ಧೆ-2013

ಕುಂದಾಪುರ : ಕಳೆದ ಹಲವು ವರ್ಷಗಳಿಂದ ಯಕ್ಷಗಾನದ ವಿವಿಧ ಪ್ರಕಾರಗಳ ಸ್ಪರ್ಧೆಯನ್ನು ಹಮ್ಮಿಕೊಂಡು ಬಂದ ತೆಕ್ಕಟ್ಟೆ-ಕೊಮೆ ಯಶಸ್ವಿ ಕಲಾವೃಂದ ಅ.6ರಂದು ತೆಕ್ಕಟ್ಟೆಯ ಹಯಗ್ರೀವ ಸಬಾಭವನದಲ್ಲಿ ಬಡಗುತಿಟ್ಟಿನ ಶೈಲಿಯಲ್ಲಿ 'ಏಕ ವ್ಯಕ್ತಿ ಯಕ್ಷಗಾನ ಸ್ಪರ್ಧೆ'ಯನ್ನು ಹಮ್ಮಿಕೊಂಡಿದೆ.

15 ನಿಮಿಷಗಳ ಕಾಲಮಿತಿಯಲ್ಲಿ ಅಂಗಿಕ ಮತ್ತು ವಾಚಿಕಾಭಿನಯ ಸಹಿತ ಸ್ಪರ್ದಾಳುಗಳು ಪ್ರರ್ದಶನ ನೀಡುವುದಕ್ಕೆ ಅವಕಾಶವಿದೆ. ಹವ್ಯಾಸಿ ಕಲಾವಿದರಿಗೆ ಮಾತ್ರ ಸೀಮಿತವಾದ ಈ ಸ್ಪರ್ಧೆಯಲ್ಲಿ 16ವರ್ಷದ ಕೆಳಗಿನ ಜೂನಿಯರ್‌ ವಿಭಾಗ ಮತ್ತು 16ವರ್ಷಕ್ಕಿಂತ ಮೇಲ್ಪಟ್ಟ ಸೀನಿಯರ್‌ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ.

ಹಿಮ್ಮೇಳ -ವೇಷಭೂಷಣಗಳನ್ನು ಸಂಘಟಕರು ಒದಗಿಸಲಿದ್ದು, ಪ್ರಥಮ 2 ಸಾವಿರ, ದ್ವಿತಿಯ 1 ಸಾವಿರ, ಹಾಗೂ ತೃತೀಯ 500 ರೂ. ಬಹುಮಾನವಿರುತ್ತದೆ. ಅ.1 ಹೆಸರು ನೋಂದಾಯಿಸಲು ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ದೂ.9945947771ನ್ನು ಸಂಪರ್ಕಿಸಲು ಕೋರಲಾಗಿದೆ.

ಕೃಪೆ : ಉದಯವಾಣಿ

Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ