ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಮಕ್ಕಳಿಗೆ ಯಕ್ಷಗಾನ ಕಲಿಕೆಗೆ ಪೋಷಕರು ಪ್ರೋತ್ಸಾಹಿಸಲಿ: ಸೋದೆ ಶ್ರೀ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಬುಧವಾರ, ಡಿಸೆ೦ಬರ್ 18 , 2013
ಡಿಸೆ೦ಬರ್ 18, 2013

ಮಕ್ಕಳಿಗೆ ಯಕ್ಷಗಾನ ಕಲಿಕೆಗೆ ಪೋಷಕರು ಪ್ರೋತ್ಸಾಹಿಸಲಿ: ಸೋದೆ ಶ್ರೀ

ಉಡುಪಿ : ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಡಿ.1ರಿಂದ ನಡೆಯುತ್ತಿರುವ 34ಪ್ರೌಢ ಶಾಲಾ ಮಕ್ಕಳ ಕಿಶೋರ ಯಕ್ಷ ಸಂಭ್ರಮಕ್ಕೆ ಬುಧವಾರ ವೈಭವದ ತೆರೆಬಿತ್ತು. ಆಶೀರ್ವಚನ ನೀಡಿದ ಪರ್ಯಾಯ ಸೋದೆ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಮಕ್ಕಳ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಯಕ್ಷಗಾನ ಕಲಿಕೆಗೆ ಹೆತ್ತವರು ಪ್ರೋತ್ಸಾಹ ನೀಡಬೇಕು. ಭಾರತೀಯ ಸಂಸ್ಕೃತಿಯ ಪ್ರತೀಕವಾಗಿರುವ ನವರಸ ಪ್ರಧಾನವಾದ ಯಕ್ಷಗಾನವನ್ನು ಉಳಿಸಿ ಬೆಳೆಸುವುದು ಸಮಾಜದ ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದು ಸಾರಿದರು.

ಮಾಜಿ ಶಾಸಕ ರಘುಪತಿ ಭಟ್ ಮಾತನಾಡಿ, 6ವರ್ಷಗಳ ಹಿಂದೆ ಯಕ್ಷಗಾನವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರೌಢ ಶಾಲಾ ಮಕ್ಕಳಿಗೆ ಯಕ್ಷಗಾನವನ್ನು ಕಲಿಸುವ ಉದ್ದೇಶದಿಂದ ಹುಟ್ಟು ಹಾಕಿದ ಈ ಕಾರ್ಯಕ್ರಮ ಇಂದು ಅದ್ಭುತ ಯಶಸ್ಸು ಸಾಸಿದೆ. ಇದನ್ನು ಪ್ರಾಥಮಿಕ ಶಾಲೆಯ 4ನೇ ತರಗತಿಯಿಂದಲೇ ಆರಂಭಿಸಬೇಕು ಎಂಬ ಬೇಡಿಕೆ ಇದೆ. ಭವಿಷ್ಯದಲ್ಲಿ ಯಕ್ಷಗಾನ ಕಲಿತ ಮಕ್ಕಳು ಎಲ್ಲರೂ ಕಲಾವಿದರಾಗದಿದ್ದರೂ ಉತ್ತಮ ಪ್ರೇಕ್ಷಕರಾಗಬಲ್ಲರು. ಉಡುಪಿ ವಿಧಾನಸಭಾ ಕ್ಷೇತ್ರದ ಪ್ರೌಢಶಾಲೆಗಳಲ್ಲಿ 1,500ಕ್ಕೂ ಅಕ ಮಕ್ಕಳು ಯಕ್ಷಗಾನ ಕಲಿಯುತ್ತಿದ್ದಾರೆ. ಇದನ್ನು ಮತ್ತಷ್ಟು ವಿಸ್ತರಿಸಲು ಕನ್ನಡ ಸಂಸ್ಕೃತಿ ಇಲಾಖೆ ಅನುದಾನ ನೀಡಿ ಸಹಕರಿಸಬೇಕು ಎಂದರು.

ಯಕ್ಷಶಿಕ್ಷಣ ಟ್ರಸ್ಟ್‌ನ ಉಪಾಧ್ಯಕ್ಷ ಡಾ.ನಿ.ಬೀ.ವಿಜಯ ಬಲ್ಲಾಳ್ ಮಾತನಾಡಿ, ಕರಾವಳಿಯ ಗಂಡುಕಲೆ ಯಕ್ಷಗಾನವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಯಕ್ಷಗಾನ ಅಕಾಡೆಮಿಗೆ ಸರಕಾರದಿಂದ ಹೆಚ್ಚಿನ ಅನುದಾನ ಹರಿದು ಬರಲಿ ಎಂದರು.

ಡಿ. 1ರಿಂದ ರಾಜಾಂಗಣದಲ್ಲಿ ನಡೆದ ಕಿಶೋರ ಯಕ್ಷ ಸಂಭ್ರಮದಲ್ಲಿ 34ಪ್ರೌಢ ಶಾಲೆಗಳ 795ಕ್ಕೂ ಅಕ ವಿದ್ಯಾರ್ಥಿಗಳು ಬಣ್ಣದ ವೇಷ ತೊಟ್ಟು ಕಾಲಿಗೆ ಗೆಜ್ಜೆ ಕಟ್ಟಿ ಕುಣಿದಿದ್ದಾರೆ. ಇದರಲ್ಲಿ 413ಬಾಲಕರಾದರೆ 382ಮಂದಿ ಹುಡುಗಿಯರಿರುವುದು ಕಾರ್ಯಕ್ರಮದ ಜನಪ್ರಿಯತೆಗೆ ಸಾಕ್ಷಿಯಾಗಿದೆ. ಈ ಕಲೆಯನ್ನು ಉಳಿಸಲು ಮುಸ್ಲಿಂ, ಕ್ರೈಸ್ತ ಮತದ ವಿದ್ಯಾರ್ಥಿಗಳು ಸೇರಿದಂತೆ ಅನ್ಯ ರಾಜ್ಯದ 61ಕ್ಕೂ ಅಧಿಕ ಮಂದಿ ಯಕ್ಷಗಾನ ಪ್ರದರ್ಶನದಲ್ಲಿ ಭಾಗಿಯಾಗಿದ್ದಾರೆ.

ಮಕ್ಕಳ ಯಕ್ಷಗಾನ ಪ್ರದರ್ಶನಕ್ಕೆ ಶ್ರಮಿಸಿದ ಗುರುಗಳಿಗೆ ಗೌರವಾರ್ಪಣೆ ನಡೆಯಿತು. ಪರ್ಯಾಯ ಸೋದೆ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ 2ಲಕ್ಷ ರೂ.ದೇಣಿಗೆಯನ್ನು ಯಕ್ಷಶಿಕ್ಷಣ ಟ್ರಸ್ಟ್‌ನ ಅಧ್ಯಕ್ಷ ಶಾಸಕ ಪ್ರಮೋದ್ ಮಧ್ವರಾಜ್ ಅವರಿಗೆ ಹಸ್ತಾಂತರಿಸಿದರು.

ಪೇಜಾವರ ಹಿರಿಯ ಯತಿ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ, ಟೆಬ್ಮಾ ಪಿಆರ್‌ಓ ರಾಮ್‌ದಾಸ್ ಭಟ್, ಯಕ್ಷಗಾನ ಕಲಾರಂಗದ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಮಠದ ದಿವಾನರಾದ ಪಾಡಿಗಾರು ಶ್ರೀನಿವಾಸ ತಂತ್ರಿ ಉಪಸ್ಥಿತರಿದ್ದರು. ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು. ಟ್ರಸ್ಟಿ ಎಸ್.ವಿ.ಭಟ್ ಸ್ವಾಗತಿಸಿದರು.

ಕೃಪೆ : http://vijaykarnataka.com

Share

ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ
ಪೂರಕ ಲೇಖನಗಳು
 ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ