ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ವಿದ್ಯಾರ್ಥಿಗಳಿಂದ ಯಕ್ಷಗಾನ ಉಳಿಯಲು ಸಾಧ್ಯ : ಕಾಣಿಯೂರು ಶ್ರೀ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಶನಿವಾರ, ಡಿಸೆ೦ಬರ್ 20 , 2014
ಡಿಸೆ೦ಬರ್ 20, 2014

ವಿದ್ಯಾರ್ಥಿಗಳಿಂದ ಯಕ್ಷಗಾನ ಉಳಿಯಲು ಸಾಧ್ಯ

ಉಡುಪಿ : ವಿದ್ಯಾರ್ಥಿಗಳು ಯಕ್ಷಗಾನ ಕಲಿತಾಗ ಮಾತ್ರ ಮುಂದಿನ ಪೀಳಿಗೆಗೆ ಯಕ್ಷಗಾನ ಉಳಿಯಲು ಸಾಧ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲೆಯ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಪರ್ಯಾಯ ಕಾಣಿಯೂರು ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಹೇಳಿದ್ದಾರೆ.

ಶ್ರೀಕೃಷ್ಣಮಠ, ಪರ್ಯಾಯ ಕಾಣಿಯೂರು ಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಉಡುಪಿ ಯಕ್ಷಶಿಕ್ಷಣ ಟ್ರಸ್ಟ್ ವತಿ ಯಿಂದ ಡಿ.1ರಿಂದ ರಾಜಾಂಗಣದಲ್ಲಿ ನಡೆಯು ತ್ತಿದ್ದ ಕಿಶೋರ ಯಕ್ಷ ಸಂಭ್ರಮದ ಸಮಾ ರೋಪದಲ್ಲಿ ಗುರುವಾರ ಅವರು ಮಾತ ನಾಡಿದರು. ಯಕ್ಷಗಾನ ಎಂಬುದು ಅದ್ಭುತ ಮತ್ತು ಅನನ್ಯವಾದ ಕಲೆ. ಇದನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕಾಗುತ್ತದೆ. ವಿದ್ಯಾರ್ಥಿ ಗಳಿಂದ ಈ ಕೆಲಸ ಸಾಧ್ಯ. ಯಕ್ಷಗಾನದಲ್ಲಿ ತೊಡಗಿಸಿಕೊಂಡಾಗ ನಿರರ್ಗಳವಾಗಿ ಮಾತನಾಡಲು ಸಹಕಾರಿಯಾಗುತ್ತದೆ. ಯಕ್ಷಗಾನ ಸೇರಿದಂತೆ ಯಾವುದೇ ಕಲೆಗಳು ನಮ್ಮ ವ್ಯಕ್ತಿತ್ವದ ವಿಕಾಸಕ್ಕೆ ಪೂರಕ ಎಂಬುದನ್ನು ಹೆತ್ತವರು ತಿಳಿದುಕೊಳ್ಳಬೇಕು ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ರವಿಶಂಕರ್, ಉದ್ಯಮಿ ಭುವನೇಂದ್ರ ಕಿದಿಯೂರು. ಜನಾರ್ದನ ಮಹಾಕಾಳಿ ದೇವಸ್ಥಾನ ಧರ್ಮದರ್ಶಿ ಡಾ. ನಿ.ಬೀ.ವಿಜಯ ಬಲ್ಲಾಳ್ ಉಪಸ್ಥಿತರಿದ್ದರು. ಅಕ್ಷಯ ಹೆಗ್ಡೆ ಮತ್ತು ಶಾಲಿಕಾ ಎಕ್ಕಾರು ಅಭಿಪ್ರಾಯ ವ್ಯಕ್ತಪಡಿಸಿದರು. ಎಸ್.ವಿ.ಭಟ್ ಸ್ವಾಗತಿಸಿದರು. ನಾರಾಯಣ ಎಂ. ಹೆಗಡೆ ವಂದಿ ಸಿದರು. ಮುರಲಿ ಕಡೆಕಾರು ನಿರೂಪಿಸಿದರು.ಕೃಪೆ : http://vijaykarnataka.com


Share

ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ
ಪೂರಕ ಲೇಖನಗಳು
 ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ